Mysore
19
overcast clouds

Social Media

ಭಾನುವಾರ, 25 ಜನವರಿ 2026
Light
Dark

ಬೂಕರ್‌ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್‌ಗೆ ಸಿಎಂ ಅಭಿನಂದನೆ

banu mushtaq

ಬೆಂಗಳೂರು : 2025ನೇ ಸಾಲಿನ ಬೂಕರ್‌ ಪ್ರಶಸ್ತಿ ವಿಜೇತ ಖ್ಯಾತ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು ಎಂದು ತಿಳಿಸಿದ್ದಾರೆ.

ಸುದ್ದಿ ಹಿನ್ನೆಲೆ:- ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ಕೃತಿಗೆ ಬೂಕರ್‌ ಪ್ರಶಸ್ತಿ

ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್‌ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ ‘ಹೃದಯ ದೀಪ’ವನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

Tags:
error: Content is protected !!