Categories: ರಾಜ್ಯ

ಡಾಕ್ಟರ್, ಎಂಜಿನಿಯರಿಂಗ್ ವಿದ್ಯಾವಂತರಾದರೂ ಕಂದಾಚಾರ ಬಿಡೋದಿಲ್ಲ, ಇಂಥಾ ಶಿಕ್ಷಣ ಬೇಕಾ? ಸಿ‌ಎಂ.ಸಿದ್ದರಾಮಯ್ಯ

ಮೈಸೂರು: ಇಂದಿನ ಕಾಲದಲ್ಲಿ ಡಾಕ್ಟರ್, ಎಂಜಿನಿಯರಿಂಗ್ ಓದಿ ವಿದ್ಯಾವಂತರಾದರೂ ಕಂದಾಚಾರ ಮಾಡೋದನ್ನು ಮಾತ್ರ ಬಿಡುವುದಿಲ್ಲ. ಇಂತಹವರಿಗೆ ಶಿಕ್ಷಣ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿ ಇಂದು(ನ.22) ಸಿದ್ದಾರ್ಥ ಎಜುಕೇಷನ್‌ ಸೊಸೈಟಿಯ ಮೈಸೂರಿನ ಕ್ವೆಸ್ಟ್‌ ಅಕಾಡೆಮಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಚನ ಸಾಹಿತ್ಯದ ಬಸವಣ್ಣನವರು ಅಂದಿನ ಕಾಲದಲ್ಲೇ ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಆದರೆ ಇದೀಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ದಿನಗಳಲ್ಲಿ ವಿದ್ಯಾವಂತರಿಗೆ ಕೇವಲ ಶಿಕ್ಷಣ ಸಿಕ್ಕರೆ ಸಾಲದು, ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ತಿಳಿದುಕೊಳ್ಳಬೇಕು. ಇವೆರಡೂ ಇಲ್ಲದಿರುವ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯವಾಗಿದೆ. ಅನೇಕರು ಶಿಕ್ಷಣ ಪಡೆದಿರುತ್ತಾರೆ , ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾಗಿ ಮತ್ತು ಧಾರ್ಮಿಕ ತಾರತಮ್ಯ ಪಾಲಿಸೋದು ಮಾಡಿದರೆ ಅಂತಹ ಶಿಕ್ಷಣದಿಂದ ಏನು ಪ್ರಯೋಜನ. ಕೆಲವರು ಮಾತ್ರ ಸಮಾಜದ ಸವಲತ್ತುಗಳನ್ನು ಅನುಭವಿಸಬೇಕಾ? ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಈ ಸವಲತ್ತುಗಳು ಸಿಗಬೇಕು ಎಂದು ಹೇಳಿದರು.

ನಮ್ಮ ಜಾತಿಯವರಿಗೆ ವೋಟು ನೀಡಿ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಈಗಿನ ಕಾಲದಲ್ಲಿ ಹೇಳಿಕೊಳ್ಳೋಕೆ ಮಾತ್ರ ವಿದ್ಯಾವಂತರಾಗಿರುತ್ತಾರೆ. ಆದರೆ ಅವನು ನಮ್ಮ ಜಾತಿಯವನಲ್ಲ, ಅವನಿಗೆ ವೋಟು ನೀಡುವುದು ಬೇಡ. ಇವರು ನಮ್ಮ ಜಾತಿಯವರು ಇವರಿಗೆ ವೋಟು ನೀಡಿ ಎಂದು ಕೇಳುತ್ತಾರೆ. ಎಷ್ಟೇ ವಿದ್ಯಾವಂತ ವ್ಯಕ್ತಿಯಾಗಿದ್ದರೂ ಜಾತಿಯನ್ನು ನೋಡುತ್ತಾರೆ. ಅವರಿಗೆ ರಾಜಕೀಯ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ವೋಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ ಎಂದು ವ್ಯಂಗ್ಯವಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

13 mins ago

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…

34 mins ago

ಯಾವ ನಾಯಕರು ಜೆಡಿಎಸ್‌ ಸಂಪರ್ಕಿಸಿಲ್ಲ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…

1 hour ago

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…

2 hours ago

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

2 hours ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

3 hours ago