ಬೆಂಗಳೂರು: ಇಲ್ಲಿನ ವಿಧಾಸೌಧ ಸಭಾಂಗಣದಲ್ಲಿ ನಡೆದ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು
ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಅವರ ದೂರುಗಳನ್ನು ಆಲಿಸಿ, ಅಗತ್ಯ ಪರಿಹಾರ ಒದಗಿಸಬೇಕು ಎಂದು ತಾಕೀತು ಮಾಡಿದರು.
ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ. ಬರ ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ ಎಂದು ಮಾಹಿತಿ ಪಡೆದರು.
ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. 225 ಅಂತಹ ಜಲಾಗ್ರಾಮಗಳನ್ನು, 1247 ಗ್ರಾಮ ಪಂಚಾಯತ್ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯತ್ ನಲ್ಲಿ ಟಾಸ್ಕ್ ಪೋಸ್ಟ್ ರಚನೆ. ಕಂದಾಯ ಇಲಾಖೆ, ಪಂಚಾಯತ್, ಪೋಲಿಸ್, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್ ಅಧಿಕಾರಿ ನೇಮಕ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಎಲ್ಲಾ ಸಲಕರಣೆ ಲಭ್ಯವಾಗಿಡುವಂತೆ ಸೂಚನೆ ನೀಡಿದರು.
ಬೆಳೆ ಹಾನಿ, ಮನೆ ಹಾನಿ ಎಸ್‌ಡಿಆರ್‌ಎಫ್ ಪ್ರಕಾರ ನೀಡಲು ಸೂಚನೆ ನೀಡಲಾಗಿದೆ. ಜಿಲ್ಲಾಡಳಿತ ಮುಂಜಾಗರೂಕತೆ ವಹಿಸಲು ಸೂಚನೆ ನೀಡಲಾಗಿದೆ. ಪ್ರಾಣ ಹಾನಿ ತಪ್ಪಿಸುವುದು ಆದ್ಯತೆಯಾಗಬೇಕು.
27 ಜಿಲ್ಲೆ 177 ತಾಲೂಕುಗಳು, 1247 ಗ್ರಾಮ ಪಂಚಾಯತ್‌ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, ಪ್ರತಿ ಕಡೆ ಟಾಸ್ಕ್‌ಪೋರ್ಸ್ ರಚಿಸಬೇಕು. 20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ. ಅಂತಹ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಮನೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. 2225 ಗ್ರಾಮಗಳು 2242 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಜನರ ಸುರಕ್ಷತೆಯೆಡೆಗೆ ಹೆಚ್ಚಿನ ಗಮನಹರಿಸಬೇಕು ಎಂದರು.
ಈ ಬಾರಿ ಪೂರ್ವ ಮುಂಗಾರಿನಲ್ಲಿ 3714 ಮನೆಗಳಿಗೆ ಹಾನಿ ಉಂಟಾಗಿದ್ದು, ಎಸ್‌ಡಿಆರ್‌ಎಫ್ ಮಾನದಂಡ ಪ್ರಕಾರ ಪರಿಹಾರವನ್ನು ತಕ್ಷಣ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಸೂಚಿಸಿದರು.
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ. ಈ…
ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ…
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಪ್ರಧಾನಿ…
ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಈ…