ರಾಜ್ಯ

ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಒದಗಿಸಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ವಿಧಾಸೌಧ ಸಭಾಂಗಣದಲ್ಲಿ ನಡೆದ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು

ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಅವರ ದೂರುಗಳನ್ನು ಆಲಿಸಿ, ಅಗತ್ಯ ಪರಿಹಾರ ಒದಗಿಸಬೇಕು ಎಂದು ತಾಕೀತು ಮಾಡಿದರು.

ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ. ಬರ ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ ಎಂದು ಮಾಹಿತಿ ಪಡೆದರು.

ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. 225 ಅಂತಹ ಜಲಾಗ್ರಾಮಗಳನ್ನು, 1247 ಗ್ರಾಮ ಪಂಚಾಯತ್‌ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯತ್‌ ನಲ್ಲಿ ಟಾಸ್ಕ್‌ ಪೋಸ್ಟ್‌ ರಚನೆ. ಕಂದಾಯ ಇಲಾಖೆ, ಪಂಚಾಯತ್‌, ಪೋಲಿಸ್‌, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್‌ ಅಧಿಕಾರಿ ನೇಮಕ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಎಲ್ಲಾ ಸಲಕರಣೆ ಲಭ್ಯವಾಗಿಡುವಂತೆ ಸೂಚನೆ ನೀಡಿದರು.

ಬೆಳೆ ಹಾನಿ, ಮನೆ ಹಾನಿ ಎಸ್‌ಡಿಆರ್‌ಎಫ್‌ ಪ್ರಕಾರ ನೀಡಲು ಸೂಚನೆ ನೀಡಲಾಗಿದೆ. ಜಿಲ್ಲಾಡಳಿತ ಮುಂಜಾಗರೂಕತೆ ವಹಿಸಲು ಸೂಚನೆ ನೀಡಲಾಗಿದೆ. ಪ್ರಾಣ ಹಾನಿ ತಪ್ಪಿಸುವುದು ಆದ್ಯತೆಯಾಗಬೇಕು.

27 ಜಿಲ್ಲೆ 177 ತಾಲೂಕುಗಳು, 1247 ಗ್ರಾಮ ಪಂಚಾಯತ್‌ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, ಪ್ರತಿ ಕಡೆ ಟಾಸ್ಕ್‌ಪೋರ್ಸ್‌ ರಚಿಸಬೇಕು. 20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ. ಅಂತಹ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಮನೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. 2225 ಗ್ರಾಮಗಳು 2242 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಜನರ ಸುರಕ್ಷತೆಯೆಡೆಗೆ ಹೆಚ್ಚಿನ ಗಮನಹರಿಸಬೇಕು ಎಂದರು.

ಈ ಬಾರಿ ಪೂರ್ವ ಮುಂಗಾರಿನಲ್ಲಿ 3714 ಮನೆಗಳಿಗೆ ಹಾನಿ ಉಂಟಾಗಿದ್ದು, ಎಸ್‌ಡಿಆರ್‌ಎಫ್‌ ಮಾನದಂಡ ಪ್ರಕಾರ ಪರಿಹಾರವನ್ನು ತಕ್ಷಣ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

8 mins ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

25 mins ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

2 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

4 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

7 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

8 hours ago