Mysore
21
clear sky

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್‌ ಡೇ

ಧಾರವಾಡ/ಬೆಂಗಳೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಜ.27 ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಇಂದು ಪ್ರಕಟಿಸಲಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಇಂದು(ಫೆಬ್ರವರಿ.7) ಬೆಳಿಗ್ಗೆ 10.30 ಗಂಟೆಗೆ ಅಂತಿಮ ಆದೇಶ ಹೊರಡಿಸಲಿದೆ.

ಈ ತೀರ್ಪಿನ ಅನ್ವಯದಿಂದಾಗಿ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಬಿಗ್‌ ಡೇ ಆಗಿರಲಿದೆ.

ಏನಿದು ಪ್ರಕರಣ?

ಮುಡಾ ಪ್ರಕರಣವನ್ನು ಬಿಐಗೆ ವಹಿಸಲು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನವರಿ.27 ರಂದು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ಸುಧೀರ್ಘವಾಗಿ ವಾದ- ಪ್ರತಿವಾದವನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು.

Tags:
error: Content is protected !!