ರಾಜ್ಯ

ಸಿಎಂ ಸಿದ್ದರಾಮಯ್ಯ ಆಪ್ತರಿಗೆ ಸಿಗುತ್ತಾ ಕೆಪಿಸಿಸಿ ಅಧ್ಯಕ್ಷ ಸ್ಥಾನ.?

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಕೂಗು ಎದ್ದಿದೆ.

ಒಂದೆಡೆ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದ್ದು, ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಮಾತುಗಳು ಕೂಡ ಗುಸು ಗುಸು ಎನ್ನುತ್ತಿವೆ.

ಇದೆಲ್ಲದರ ಜೊತೆಗೆ ಹೆಚ್ಚುವರಿ ಡಿಸಿಎಂಗಳ ನೇಮಕ ಮಾಡಬೇಕು ಎಂಬ ಬಗ್ಗೆಯೂ ಆಡಳಿತರೂಢ ಕಾಂಗ್ರೆಸ್‌ನಲ್ಲೇ ಆಗ್ರಹ ಕೇಳಿ ಬಂದಿದೆ. ಈಗ ದೆಹಲಿ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಜೊತೆಗೆ ತನ್ನ ಆಪ್ತರಿಗೆ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಗಾದಿ ಕೊಡಿಸಲು ಸಿಎಂ ಸಿದ್ದರಾಮಯ್ಯ ಭಾರೀ ಷಡ್ಯಂತ್ರ ರೂಪಿಸಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್‌ ಹೈಕಮಾಂಡ್‌ ಒಲವು ತೋರಿರುವ ಹಿನ್ನೆಲೆಯಲ್ಲಿ ತನ್ನ ಆಪ್ತರಿಗೆ ಅಧ್ಯಕ್ಷ ಸ್ಥಾನ ಕೊಡಿಸಲು ಸಿಎಂ ಸಿದ್ದರಾಮಯ್ಯ ಪ್ಲಾನ್‌ ಮಾಡುತ್ತಿದ್ದಾರೆ ಎನ್ನಲಾಗಿದೆ.

ತಮ್ಮ ಆಪ್ತ ಬಣದಲ್ಲಿ ಗುರುತಿಸಿಕೊಂಡ ಸಚಿವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಇರಿಸಲು ಪ್ಲಾನ್‌ ಮಾಡಿದ್ದಾರೆ ಎನ್ನಲಾಗಿದೆ. ತಮ್ಮ ಆಪ್ತ ಸಚಿವರಾದ ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಹಾಗೂ ಈಶ್ವರ್‌ ಖಂಡ್ರೆ ಪೈಕಿ ಯಾರಾದರೂ ಒಬ್ಬರ ಹೆಸರನ್ನು ಪ್ರಸ್ತಾಪಿಸಲು ಸಿಎಂ ಸಿದ್ದು ಒಲವು ತೋರಿಸಿದ್ದಾರೆ ಎನ್ನಲಾಗಿದೆ.

ಒಂದೊಂದು ಕೋಟಾದ ಒಬ್ಬೊಬ್ಬ ಸಚಿವರ ಹೆಸರು ಪ್ರಸ್ತಾಪಿಸಲು ಸಿದ್ದರಾಮಯ್ಯ ಸಕತ್ ಪ್ಲಾನ್‌ ರೂಪಿಸಿದ್ದು, ಅಹಿಂದ ಕೋಟಾದಡಿ ಸಚಿವ ಸತೀಶ್‌ ಜಾರಕಿಹೊಳಿ, ವೀರಶೈವ ಲಿಂಗಾಯತ ಕೋಟಾದಡಿ ಸಚಿವ ಎಂ.ಬಿ.ಪಾಟೀಲ್‌ ಅಥವಾ ಸಚಿವ ಈಶ್ವರ್‌ ಖಂಡ್ರೆ ಹೆಸರನ್ನು ಶಿಫಾರಸ್ಸು ಮಾಡಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿ ಈಗ ಎಲ್ಲೆಡೆ ಹರಿದಾಡುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಎಂ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ನಿರ್ಮಾಣಕ್ಕೆ ಮುಂದಾದ ಮೈಸೂರು ಜಿಲ್ಲಾಡಳಿತ

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ…

14 mins ago

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

1 hour ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

1 hour ago

ಓದುಗರ ಪತ್ರ: ಯುದ್ಧದ ಉನ್ಮಾದದಿಂದ ಹೊರಬರಲಿ

ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಶುರುವಾಗಿ ತಿಂಗಳೇ ಕಳೆದರೂ ನಿಲ್ಲುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಯುದ್ಧದ ಭೀಕರತೆ ದಿನೇ…

1 hour ago

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

4 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

4 hours ago