Mysore
36
scattered clouds

Social Media

ಶನಿವಾರ, 25 ಏಪ್ರಿಲ 2026
Light
Dark

ಮುಡಾ ನಿವೇಶನ ಹಂಚಿಕೆ ಆರೋಪಗಳು ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದರು.

ನಿವೇಶನ ನೀಡಿದಾಗ 2021 ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ಕೇವಲ ರಾಜಕೀಯ ಪ್ರೇರಿತ ಆಪಾದನೆಯಷ್ಟೆ ಎಂದು ಕಿಡಿಕಾರಿದರು.

Tags:
error: Content is protected !!