ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದರು.
ನಿವೇಶನ ನೀಡಿದಾಗ 2021 ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ಕೇವಲ ರಾಜಕೀಯ ಪ್ರೇರಿತ ಆಪಾದನೆಯಷ್ಟೆ ಎಂದು ಕಿಡಿಕಾರಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…