ರಾಜ್ಯ

ನಕ್ಸಲರಿಗೆ ಕಾನೂನಾತ್ಮಕ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಕರೆ: ಮೋಸ್ಟ್‌ ವಾಂಟೆಡ್‌ ನಕ್ಸಲರು ಶರಣಾಗತಿಗೆ ತೀರ್ಮಾನ

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾನೂನಾತ್ಮಕ ಹೋರಾಟ ಕರೆಗೆ ಮಣಿದು ಕರ್ನಾಟಕ, ಕೇರಳ ಹಾಗೂ ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಆರು ನಕ್ಸಲರು ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ತೀರ್ಮಾನಿಸಿದ್ದಾರೆ.

ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಶಸ್ತ್ರಾಸ್ತ್ರ ತ್ಯಜಿಸಿ ಹಾಗೂ ಕಾನೂನಾತ್ಮಕ ಹೋರಾಟ ಮಾಡಿ ಎಂದು ಕರೆ ನೀಡಿದ್ದರು. ಈ ಕರೆಯ ಬೆನ್ನಲ್ಲೇ ದಕ್ಷಿಣ ಭಾರತದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಜೀಶ, ಕರ್ನಾಟಕದ ನಕ್ಸಲ್‌ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ ಹಾಗೂ ಆಂಧ್ರ ಪ್ರದೇಶದ ಕೆ.ವಸಂತ ಮತ್ತು ಮಾರೆಪ್ಪ ಅರೋಲಿ ಶರಣಾಗತಿಗೆ ತೀರ್ಮಾನಿಸಿದ್ದು, ಇನ್ನು ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗುವ ಸಾಧ್ಯತೆ ಇದೆ.

ಈ ಕುರಿತು ನಕ್ಸಲರು ತಮ್ಮ ಶಾಂತಿಗಾಗಿ ಬೇಡಿಕೆಗಳನ್ನಿಟ್ಟು, ನಾಗರೀಕ ವೇದಿಕೆಗೆ ಪತ್ರ ಬರೆದಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಾಗರೀಕ ವೇದಿಕೆಯ ಸದಸ್ಯರು ಚರ್ಚಿಸಲಿದ್ದಾರೆ.

ನಕ್ಸಲರ ಬೇಡಿಕೆಗಳೇನು?

1. ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಯೂ ಘನತೆಯುತವಾಗಿರಬೇಕು ಮತ್ತು ತಮ್ಮ ಆತ್ಮ ಗೌರವಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದು. ಹೋರಾಟದ ಮಾರ್ಗವನ್ನು ಬದಲಾಯಿಸಿ, ಪ್ರಜಾತಾಂತ್ರಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಯಾವುದೇ ರೀತಿಯ ಅಡ್ಡಿಯಾಗಬಾರದು.

2. ನಕ್ಸಲರು ಹೊರಬಂದ ಬಳಿಕ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು, ಯಾವುದೇ ಸಂಬಂಧವಿಲ್ಲದ ಕೆಲವು ಪ್ರಕರಣಗಳಲ್ಲಿ ಅವರ ಹೆಸರುಗಳನ್ನು ಸೇರಿಸಿದ್ದು, ಈ ಪ್ರಕರಣಗಳ ಜಾಲದಿಂದ ಮುಕ್ತಗೊಳಿಸಬೇಕು. ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕರಿಸಬೇಕು.

3. ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು. ಅವರು ಹೊರಬಂದ ಬಳಿಕ ಅವರ ಜೀವನಕ್ಕೆ ದಾರಿ ಏನು ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು.

4. ಅವರ ಎಲ್ಲಾ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಡಿಯಲ್ಲಿ ತಂದು ತ್ವರಿತ ವಿಚಾರಣೆ ಮಾಡುವಂತೆ ಅವಕಾಶ ನೀಡಬೇಕು.

5. ವಿಕ್ರಮ್‌ ಗೌಡ ಅವರ ಎನ್‌ಕೌಂಟರ್‌ ಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು.

6. ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಹಲವು ನಕ್ಸಲರ ಜೀವನ ಅಂತ್ರವಾಗಿದ್ದು, ಅವರ ಕೇಸ್​ಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೆ ಸಹ ಈ ಪ್ಯಾಕೇಜ್ ಅನ್ವಯವಾಗುವಂತೆ ಮಾಡುವ ಮೂಲಕ ಅವರ ಬಿಡುಗಡೆಗೆ ಸಹಕರಿಸಬೇಕು.

7. ಈ ಎಲ್ಲ ವಿಚಾರಗಳಲ್ಲಿ ಕರ್ನಾಟಕ, ಕೇರಳ ಹಾಗೂ ಆಂಧ್ರ ಪ್ರದೇಶದ ರಾಜ್ಯಗಳ ನಿಲುವು ಒಂದೇಯಾಗಿರುತ್ತದಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

11 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

52 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

1 hour ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

12 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

13 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

14 hours ago