ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ ಅವರ ಕಾನೂನಾತ್ಮಕ ಹೋರಾಟ ಕರೆಗೆ ಮಣಿದು ಕರ್ನಾಟಕ, ಕೇರಳ ಹಾಗೂ ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರು ನಕ್ಸಲರು ಚಿಕ್ಕಮಗಳೂರಿನ ಜಿಲ್ಲಾಡಳಿತ ಮುಂದೆ ಶರಣಾಗತಿಗೆ ತೀರ್ಮಾನಿಸಿದ್ದಾರೆ.
ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಶಸ್ತ್ರಾಸ್ತ್ರ ತ್ಯಜಿಸಿ ಹಾಗೂ ಕಾನೂನಾತ್ಮಕ ಹೋರಾಟ ಮಾಡಿ ಎಂದು ಕರೆ ನೀಡಿದ್ದರು. ಈ ಕರೆಯ ಬೆನ್ನಲ್ಲೇ ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ನಕ್ಸಲ್ ಜೀಶ, ಕರ್ನಾಟಕದ ನಕ್ಸಲ್ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ ಹಾಗೂ ಆಂಧ್ರ ಪ್ರದೇಶದ ಕೆ.ವಸಂತ ಮತ್ತು ಮಾರೆಪ್ಪ ಅರೋಲಿ ಶರಣಾಗತಿಗೆ ತೀರ್ಮಾನಿಸಿದ್ದು, ಇನ್ನು ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗುವ ಸಾಧ್ಯತೆ ಇದೆ.
ಈ ಕುರಿತು ನಕ್ಸಲರು ತಮ್ಮ ಶಾಂತಿಗಾಗಿ ಬೇಡಿಕೆಗಳನ್ನಿಟ್ಟು, ನಾಗರೀಕ ವೇದಿಕೆಗೆ ಪತ್ರ ಬರೆದಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಾಗರೀಕ ವೇದಿಕೆಯ ಸದಸ್ಯರು ಚರ್ಚಿಸಲಿದ್ದಾರೆ.
ನಕ್ಸಲರ ಬೇಡಿಕೆಗಳೇನು?
1. ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಯೂ ಘನತೆಯುತವಾಗಿರಬೇಕು ಮತ್ತು ತಮ್ಮ ಆತ್ಮ ಗೌರವಕ್ಕೆ ಯಾವುದೇ ರೀತಿಯ ಧಕ್ಕೆಯಾಗಬಾರದು. ಹೋರಾಟದ ಮಾರ್ಗವನ್ನು ಬದಲಾಯಿಸಿ, ಪ್ರಜಾತಾಂತ್ರಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಯಾವುದೇ ರೀತಿಯ ಅಡ್ಡಿಯಾಗಬಾರದು.
2. ನಕ್ಸಲರು ಹೊರಬಂದ ಬಳಿಕ ಜೈಲುಗಳಲ್ಲಿ ಕೊಳೆಯುವ ಸ್ಥಿತಿ ಎದುರಾಗಬಾರದು, ಯಾವುದೇ ಸಂಬಂಧವಿಲ್ಲದ ಕೆಲವು ಪ್ರಕರಣಗಳಲ್ಲಿ ಅವರ ಹೆಸರುಗಳನ್ನು ಸೇರಿಸಿದ್ದು, ಈ ಪ್ರಕರಣಗಳ ಜಾಲದಿಂದ ಮುಕ್ತಗೊಳಿಸಬೇಕು. ಮುಖ್ಯವಾಹಿನಿಗೆ ಬಂದ ನಂತರ ಬೇಗನೆ ಜಾಮೀನಿನ ಮೇಲೆ ಹೊರಬರಲು ಸಹಕರಿಸಬೇಕು.
3. ಆರ್ಥಿಕ ನೆರವು ಒದಗಿಸುವ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು. ಅವರು ಹೊರಬಂದ ಬಳಿಕ ಅವರ ಜೀವನಕ್ಕೆ ದಾರಿ ಏನು ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು.
4. ಅವರ ಎಲ್ಲಾ ಮೊಕದ್ದಮೆಗಳನ್ನು ಒಂದೇ ನ್ಯಾಯಾಲಯದಡಿಯಲ್ಲಿ ತಂದು ತ್ವರಿತ ವಿಚಾರಣೆ ಮಾಡುವಂತೆ ಅವಕಾಶ ನೀಡಬೇಕು.
5. ವಿಕ್ರಮ್ ಗೌಡ ಅವರ ಎನ್‌ಕೌಂಟರ್ ಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು.
6. ಈಗಾಗಲೇ ಮುಖ್ಯವಾಹಿನಿಗೆ ಬಂದಿರುವ ಹಲವು ನಕ್ಸಲರ ಜೀವನ ಅಂತ್ರವಾಗಿದ್ದು, ಅವರ ಕೇಸ್ಗಳ ಇತ್ಯರ್ಥಕ್ಕೆ ಹಾಗೂ ಬದುಕಿನ ಭದ್ರತೆಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಬೇರೆ ಬೇರೆ ಜೈಲುಗಳಲ್ಲಿರುವ ಸಂಗಾತಿಗಳಿಗೆ ಸಹ ಈ ಪ್ಯಾಕೇಜ್ ಅನ್ವಯವಾಗುವಂತೆ ಮಾಡುವ ಮೂಲಕ ಅವರ ಬಿಡುಗಡೆಗೆ ಸಹಕರಿಸಬೇಕು.
7. ಈ ಎಲ್ಲ ವಿಚಾರಗಳಲ್ಲಿ ಕರ್ನಾಟಕ, ಕೇರಳ ಹಾಗೂ ಆಂಧ್ರ ಪ್ರದೇಶದ ರಾಜ್ಯಗಳ ನಿಲುವು ಒಂದೇಯಾಗಿರುತ್ತದಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…