Categories: ರಾಜ್ಯ

ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏ.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಗಣತಿ ವರದಿಯನ್ನು ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಮಂಡಿಸಿದ್ದು, ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏಪ್ರಿಲ್‌.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಏಪ್ರಿಲ್‌.11) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ. ಆದರೆ ಈ ವೇಳೆ ಕೇವಲ ವರದಿಯನ್ನಷ್ಟೇ ಮಂಡಿಸಲಾಗಿದ್ದು, ಸಚಿವರು ಯಾವುದೇ ಪರ-ವಿರೋಧ ಚರ್ಚೆ ಮಾಡಿಲ್ಲ. ಹೀಗಾಗಿ ಜಾತಿ ಗಣತಿ ವರದಿ ಅನುಷ್ಠಾನಗೊಳಿಸಿ ಜಾರಿಗೆ ತರಲಯ ಏಪ್ರಿಲ್‌.17 ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದರು.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಚ್ಚಿದ ಲಕೋಟೆಯನ್ನು ತೆರೆದು ಕ್ಯಾಬಿನೆಟ್‌ ಸಭೆಯಲ್ಲಿ ಸಚಿವರ ಅಭಿಪ್ರಾಯಗಳನ್ನು ಆಲಿಸಿದರು. ಬಳಿಕ  ಏಪ್ರಿಲ್‌.17ರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಜಾರಿಗೊಳಿಸುವ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

 

ಅರ್ಚನ ಎಸ್‌ ಎಸ್

Recent Posts

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

1 hour ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

1 hour ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

1 hour ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

1 hour ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

3 hours ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

3 hours ago