ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ ಗಮನಾರ್ಹ ಪ್ರಜಾಪ್ರಭುತ್ವ ಪ್ರಯಾಣ ಬೆಳೆಸುತ್ತಿರುವ ತಮಿಳುನಾಡಿನ ಸಿಎಂ ವಿಜಯ್ ಅವರಿಗೆ ಅಭಿನಂದನೆಗಳು. ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಜನರ ಅಭಿವೃದ್ಧಿ, ಸಾಂಸ್ಕೃತಿಕ ಬಾಂಧವ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡೋಣ. ತಮಿಳುನಾಡಿನ ಜನರ ಸೇವೆಯಲ್ಲಿ ಯಶಸ್ವಿ ಮತ್ತು ಪರಿವರ್ತನಾತ್ಮಕ ಆಡಳಿತ ನೀಡಲು ಶುಭಾಶಯ ತಿಳಿಸಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರು ವಿಜಯ್‌ಗೆ ಕರೆ ಮಾಡಿ ಮಾತನಾಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೋದಲ್ಲಿ ನಾನು ಸಿದ್ದರಾಮಯ್ಯ ಮಾತಾಡ್ತಿದ್ದೀನಿ. ಇತಿಹಾಸ ಸೃಷ್ಟಿ ಮಾಡಿದ ನಿಮಗೆ ಅಭಿನಂದನೆಗಳು. ಬೆಂಗಳೂರಿಗೆ ಬಂದಾಗ ಇಬ್ಬರು ಭೇಟಿಯಾಗೋಣ ಎಂದು ಹೇಳಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…