Mysore
14
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಎನ್‌ಡಿಆರ್‌ಎಫ್ ಅನುದಾನ ಗ್ಯಾರಂಟಿಗಳಿಗೆ ಬಳಸುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ನಮ್ಮ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎನ್‌ಡಿಆರ್‌ಎಫ್‌ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸಿದ ಅವರು, ಎನ್‌ಡಿಆರ್‌ಎಫ್‌ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ, ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.

ಇದನ್ನೂ ಓದಿ:-ಅಮೇರಿಕಾ ಧ್ವಜ ಸುಟ್ಟರೆ ತಕ್ಷಣ ಬಂಧನ: ಡೊನಾಲ್ಡ್‌ ಟ್ರಂಪ್‌ ಆದೇಶ

ಇನ್ನು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಿಎಂ ವಿಚಾರದಲ್ಲಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

Tags:
error: Content is protected !!