ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ನಮ್ಮ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎನ್‌ಡಿಆರ್‌ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸಿದ ಅವರು, ಎನ್‌ಡಿಆರ್‌ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ, ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.
ಇದನ್ನೂ ಓದಿ:-ಅಮೇರಿಕಾ ಧ್ವಜ ಸುಟ್ಟರೆ ತಕ್ಷಣ ಬಂಧನ: ಡೊನಾಲ್ಡ್ ಟ್ರಂಪ್ ಆದೇಶ
ಇನ್ನು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಿಎಂ ವಿಚಾರದಲ್ಲಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…