Farmers Attempt to Lay Siege to CM's House Protesting Land Acquisition
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.
ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು. ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ವ್ಯವಸ್ಥೆ ಮಾಡಲಾಗುವುದು. ವಿಧಾನಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.
ಅಮೆರಿಕಾದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ: ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.
ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…