Mysore
17
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಐಪಿಎಸ್‌ ಅಧಿಕಾರಿ ಹರ್ಷಬರ್ಧನ್‌ ಸಾವಿಗೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಯುವ ಐಪಿಎಸ್‌ ಅಧಿಕಾರಿ ಹರ್ಷ ಬರ್ಧನ್‌(24) ಸಾವಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಹಾಸನ – ಮೈಸೂರು ನಡುವಿನ ರಾಜ್ಯ
ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷ ಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು ಎಂದು ಸಂತಾಪ ಸೂಚಿಸಿದ್ದಾರೆ.

ಹರ್ಷ ಬರ್ಧನ್‌ ಅವರು ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ, ಎನ್ನುವುದು ಬಹಳ ಬೇಸರದ ಸಂಗತಿಯಾಗಿದೆ. ಹಲವು ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹರ್ಷ ಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್‌ ಮಾಡಿದ್ದಾರೆ.

Tags:
error: Content is protected !!