ಬೆಂಗಳೂರು: ಯುವ ಐಪಿಎಸ್ ಅಧಿಕಾರಿ ಹರ್ಷ ಬರ್ಧನ್(24) ಸಾವಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹಾಸನ – ಮೈಸೂರು ನಡುವಿನ ರಾಜ್ಯ
ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷ ಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು ಎಂದು ಸಂತಾಪ ಸೂಚಿಸಿದ್ದಾರೆ.
ಹರ್ಷ ಬರ್ಧನ್ ಅವರು ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ, ಎನ್ನುವುದು ಬಹಳ ಬೇಸರದ ಸಂಗತಿಯಾಗಿದೆ. ಹಲವು ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಹರ್ಷ ಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…