ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಮುಜಾಫರ್ ಅಸ್ಸಾದಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ನಮ್ಮೆಲ್ಲರಿಗೆ ಪ್ರೀತಿ ಪಾತ್ರರಾಗಿದ್ದ ಹಿರಿಯ ವಿದ್ವಾಂಸ ಹಾಗೂ ಸಾಮಾಜಿಕ ಚಿಂತಕ ಪ್ರೊ.ಮುಜಾಫರ್ ಅಸ್ಸಾದಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರು ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು ಎಂದು ತಿಳಿಸಿದ್ದಾರೆ.
ಅಸ್ಸಾದಿ ಅವರ ಅಗಲಿಕೆಯಿಂದ ನಾಡು ಬಡವಾಗಿದೆ. ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ. ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ. ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್ ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯವಾಗಿದ್ದರು.
ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…