ರಾಜ್ಯ

ಉಳ್ಳಾಲ ಖಾಝೀ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಉಳ್ಳಾಲ ಖಾಝಿ ಅಸ್ಸೈಯದ್‌ ಫಝಲ್‌ ಕೋಯಮ್ಮ ತಂಙಳ್‌ ಅಲ್‌ ಬುಖಾರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ.

ಸದಾಕಾಲ ಸಮಾಜದ ಹಿತವನ್ನು ಬಯಸುತ್ತಿದ್ದ, ಕೋಮುಸಾಮರಸ್ಯಕ್ಕಾಗಿ ದುಡಿದ ಹಿರಿಯ ಚೇತನದ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲ, ಇಡೀ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸೈಯ್ಯದ್ ಕೂರತ್ ತಂಙಳ್ ಅವರ ಕುಟುಂಬವರ್ಗ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

ವಿಧಾನಸಭಾ ಸ್ವೀಕರ್‌ ಯು.ಟಿ ಖಾದರ್‌ ಸೇರಿದಂತೆ ಇನ್ನಿತರ ಸಚಿವರು ಶಾಸಕರು ಸಂತಾಪ ಸೂಚಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

40 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

1 hour ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago