ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.
ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ.
ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…
ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…