ರಾಜ್ಯ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.

ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ.

ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

2 mins ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

7 mins ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

14 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

15 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

16 hours ago