Mysore
16
overcast clouds

Social Media

ಗುರುವಾರ, 08 ಜನವರಿ 2026
Light
Dark

ಆಗಸ್ಟ್‌ 1ರಿಂದ ಏಳನೇ ವೇತನ ಆಯೋಗ ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇದೇ ಆಗಸ್ಟ್‌ 1ರಿಂದ ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಸುಧಾಕರ್‌ ರಾವ್‌ ನೇತೃತ್ವದ 7ನೇ ವೇತನ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರು ಇದೇ ಮಾ.16 ರಂದು ಸ್ವೀಕರಿಸಿದ್ದರು. ಬಳಿಕ ಹಣಕಾಸು ಇಲಾಖೆಯಿಂದ ಹಣದ ಹೊಂದಾಣಿಕೆ ಬಗ್ಗೆ ಮಾಹಿತಿ ಕೇಳಿದ್ದ ಸಿಎಂ ಹಣಕಾಸು ವರದಿ ಆಧರಿಸಿ ಇದೀಗ ಏಳನೇ ವೇತನ ಆಯೋಗ ಬಿಡುಗಡೆಗೆ ಸಮ್ಮತಿಸಿದ್ದಾರೆ.

ಇಂದಿನ (ಜು.15) ಸಚಿವ ಸಂಪುಟ ಸಭೆಯಲ್ಲಿ ವೇತನ ಆಯೋಗ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಣಯ ಮಾಡಿದ್ದಾರೆ. ಇನ್ನು ವೇತನ ಆಯೋಗ ಶೇ. 27.5ರಷ್ಟು ವೇತನ ಹೆಚ್ಚಿಸುವಂತೆ ಶಿಫಾರಸ್ಸು ಮಾಡಿದ್ದು, ಸರ್ಕಾರ ಎಷ್ಟು ಹೆಚ್ಚು ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ.

Tags:
error: Content is protected !!