ಬೆಂಗಳೂರು: 2025ರ ಮೊದಲ ದಿನದಂದು ನೂತನ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರೀತಿಯ ನಾಡ ಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ ಎಂದು ಶುಭಾಶಯ ಹಾರೈಸಿದ್ದಾರೆ.
ಜಾತಿ, ಧರ್ಮಗಳ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ.
2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ನಾಡಿನ ಸಮಸ್ತ ಜನತೆಗೆ 2025 – ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಹೊಸ ವರ್ಷ ಎಲ್ಲ ಸಂಕಷ್ಟಗಳನ್ನು ದೂರಗೊಳಿಸಿ, ಎಲ್ಲರ ಆಸೆ, ಆಕಾಂಕ್ಷೆ, ಕನಸುಗಳು ಈಡೇರಲಿ. ಎಲ್ಲೆಡೆ ಸುಖ, ಶಾಂತಿ, ನೆಮ್ಮದಿ ನೆಲೆಸುವ ನವ ವರ್ಷವಾಗಲಿ, ನಾಡು ಸಮೃದ್ಧಿಯ ನೆಲೆಬೀಡಾಗಲೆಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.