ರಾಜ್ಯ

ಹೆಚ್ಚು ಉತ್ಪಾದನೆ ಆಗಿರುವ ಹಾಲನ್ನು ಚೆಲ್ಲಕಾಗುತ್ತಾ..? ಸಿಎಂ ಹೀಗೆ ಹೇಳಿದ್ಯಾಕೆ

ಬೆಂಗಳೂರು : ನಿನ್ನೆ ಹಾಲಿನ ದರ ಏರಿಕೆ ಮಾಡಿದ್ದು ಕೆಎಂಎಫ್‌ ಸರ್ಕಾರವಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅದನ್ನು ಸಮರ್ಥನೆ ಮಾಡಿಕೊಳ್ಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.
ನಗರದಲ್ಲಿಂದು ಹಾಲಿನ ದರ ಹೆಚ್ಚಳ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ದರವನ್ನು ಹೆಚ್ಚಿಸಿಲ್ಲ, ಹಾಲಿನ ಪ್ಯಾಕೆಟ್ ಗಳಲ್ಲಿ ಹೆಚ್ಚುವರಿ ಹಾಲನ್ನು ನೀಡಲಾಗುತ್ತಿದೆ. ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 50 ಎಂಎಲ್ ಮತ್ತು ಒಂದು ಲೀಟರ್ ಪ್ಯಾಕೆಟ್ ನಲ್ಲಿ 100 ಮಿ ಲೀ ಹಾಲನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಈ ಹೆಚ್ಚುವರಿ ಹಾಲಿಗೆ ರೂ. 1 ಮತ್ತು ರೂ 2 ಹೆಚ್ಚು ನೀಡುವಂತೆ ಬಳಕೆದಾರರನ್ನು ಕೇಳಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಜನ ನಮಗೆ ಹೆಚ್ಚುವರಿ ಹಾಲು ಬೇಕಿಲ್ಲ ಎನ್ನುತ್ತಿದ್ದಾರೆ ಇದಕ್ಕೆ ಏನು ಹೇಳ್ತಿರಾ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಫುಲ್‌ ಗರಂ ಆದರು. ಹೆಚ್ಚು ಉತ್ಪಾದನೆ ಆಗಿರುವ ಹಾಲನ್ನು ಚೆಲ್ಲಬೇಕಾ? ಎಂದು ಪ್ರಶ್ನೆ ಮಾಡಿದರು. ಬಿಜೆಪಿ ಆಡಳಿತಾವಧಿಯಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪತ್ತಿಯಾಗುತಿತ್ತು, ಈಗ 99 ಲಕ್ಷ ಹಾಲು ಮಾರಾಟಕ್ಕೆ ಲಭ್ಯವಾಗುತ್ತಿದೆ, ಬಿಜೆಪಿಯವರು ಏನೋ ಹೇಳ್ತಾರೆ ಅಂದಾಕ್ಷಣ ಅದನ್ನೇ ನಂಬಿ ಬರೆದುಬಿಡಬೇಡಿ, ಕೊಂಚ ವಿವೇಚನೆ ಬಳಸಿ ಎಂದು ಸಿಎಂ ಹೇಳಿದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕೆಎಎಸ್‌ ಪರೀಕ್ಷೆ ಮರು ಪರೀಕ್ಷೆ| ಕೆಪಿಎಸ್‌ಸಿ ಮತ್ತೆ ಬೇಜವಾಬ್ದಾರಿತನ ತೋರಿದರೆ ಪರೀಕ್ಷಾರ್ಥಿ ಪರವಾಗಿ ಬಿಜೆಪಿ ಹೋರಾಟ: ವಿಜಯೇಂದ್ರ

ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ಇದೇ ಡಿಸೆಂಬರ್‌ 29ಕ್ಕೆ ಕೆಎಎಸ್‌ ಮರು ಪರೀಕ್ಷೆ ನಡೆಯುತ್ತಿದ್ದು, ಮತ್ತೆ ಈ ಪರೀಕ್ಷೆಯಲ್ಲಿ ಮತ್ತೆ ಬೇಜವಾಬ್ದಾರಿತನ…

3 mins ago

ಮೈಸೂರು: ಅಂಬೇಡ್ಕರ್‌, ಬಾಬು ಜಗಜೀವನರಾಂ ಪ್ರತಿಮೆ ಅನಾವರಣ

ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು(ಡಿ.23) ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ…

31 mins ago

ಸಿಲಿಂಡರ್‌ ಸ್ಫೋಟ : 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರ

ಹುಬ್ಬಳ್ಳಿ : ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ…

40 mins ago

ಸಿ.ಟಿ.ರವಿ, ಲಕ್ಷ್ಮೀ ಹೆಬ್ಬಾಳ್ಕರ್‌ ಕೇಸ್‌ ಮುಗಿದ ಅಧ್ಯಾಯ: ಬಸವರಾಜ ಹೊರಟ್ಟಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್‌…

57 mins ago

ಶಿವರಾಜಕುಮಾರ್ ಚಿತ್ರಕ್ಕೆ ತಮಿಳು ನಿರ್ದೇಶಕ; ಮುಂದಿನ ವರ್ಷ ‘#MB’ ಪ್ರಾರಂಭ

ಶಿವರಾಜಕುಮಾರ್‍ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…

1 hour ago

ಮತ್ತೊಂದು ಥ್ರಿಲ್ಲರ್ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ; ‘FIR 6 to 6’ ಟ್ರೇಲರ್‍ ಬಿಡುಗಡೆ

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್‍ ಕೊಂಡಾನ’, ‘ಜಾಗ್‍ 101’ ಮತ್ತು…

1 hour ago