Mysore
25
broken clouds

Social Media

ಶುಕ್ರವಾರ, 01 ಮೇ 2026
Light
Dark

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಯಥಾವತ್ತಾಗಿ ಮುಂದುವರಿಸಲು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಮಂಡಿಸಿದ್ದಾರೆ.

ಕೇಂದ್ರ ಸರ್ಕಾರವು ನರೇಗಾ ಬದಲಿಗೆ ತಂದಿರುವ ವಿಬಿ ಜಿ ರಾಮ್‌ ಜೀ ಕಾಯ್ದೆಯು ಬಡವರ ಮತ್ತು ದಲಿತರ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಬಿ ಜಿ ರಾಮ್‌ ಜೀ ಕಾಯ್ದೆಯನ್ನು ರದ್ದುಪಡಿಸಿ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಸದನದಲ್ಲಿ ಸಿಎಂ ನಿರ್ಣಯ ಮಂಡಿಸಿದರು.

ಕರ್ನಾಟಕ ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ, ಒಕ್ಕೂಟ ತತ್ವಕ್ಕೆ ವಿರೋಧವಾಗಿರುವ ಮತ್ತು ರಾಜ್ಯದ ಬೊಕ್ಕಸಕ್ಕೆ ತೀವ್ರ ಹೊರೆ ಉಂಟುಮಾಡುವ ವಿಕಸಿತ್‌ ಭಾರತ್‌ ಗ್ಯಾರಂಟಿ ಫಾರ್‌ ರೋಜ್‌ ಗಾರ್‌ ಮತ್ತು ಅಜೀವಿಕಾ ಮಿಷನ್‌ ಕಾಯ್ದೆಯನ್ನು ಕೇಂದ್ರ ಸರ್ಕಾರವು ತಕ್ಷಣವೇ ರದ್ದುಗೊಳಿಸಬೇಕು.

ವಿಕೇಂದ್ರಿಕರಣ ತತ್ವಕ್ಕೆ ವಿರುದ್ಧವಾಗಿರುವ ಗ್ರಾಮ ಪಂಚಾಯಿತಿಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿರುವ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

 

Tags:
error: Content is protected !!