ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಯಥಾವತ್ತಾಗಿ ಮುಂದುವರಿಸಲು ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಮಂಡಿಸಿದ್ದಾರೆ.
ಕೇಂದ್ರ ಸರ್ಕಾರವು ನರೇಗಾ ಬದಲಿಗೆ ತಂದಿರುವ ವಿಬಿ ಜಿ ರಾಮ್ ಜೀ ಕಾಯ್ದೆಯು ಬಡವರ ಮತ್ತು ದಲಿತರ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಬಿ ಜಿ ರಾಮ್ ಜೀ ಕಾಯ್ದೆಯನ್ನು ರದ್ದುಪಡಿಸಿ ಮತ್ತು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಸದನದಲ್ಲಿ ಸಿಎಂ ನಿರ್ಣಯ ಮಂಡಿಸಿದರು.
ಕರ್ನಾಟಕ ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ, ಒಕ್ಕೂಟ ತತ್ವಕ್ಕೆ ವಿರೋಧವಾಗಿರುವ ಮತ್ತು ರಾಜ್ಯದ ಬೊಕ್ಕಸಕ್ಕೆ ತೀವ್ರ ಹೊರೆ ಉಂಟುಮಾಡುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಮತ್ತು ಅಜೀವಿಕಾ ಮಿಷನ್ ಕಾಯ್ದೆಯನ್ನು ಕೇಂದ್ರ ಸರ್ಕಾರವು ತಕ್ಷಣವೇ ರದ್ದುಗೊಳಿಸಬೇಕು.
ವಿಕೇಂದ್ರಿಕರಣ ತತ್ವಕ್ಕೆ ವಿರುದ್ಧವಾಗಿರುವ ಗ್ರಾಮ ಪಂಚಾಯಿತಿಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿರುವ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…