Mysore
21
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ: ಸಚಿವ ದಿನೇಶ್‌ ಗುಂಡೂರಾವ್‌

ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಈ ಕುರಿರು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಕೇಂದ್ರ ಬಿಜೆಪಿ ಷಡ್ಯಂತ್ರ ಮಾಡುತ್ತಿದ್ದು, ತನಿಖಾಧಿಕಾರಿಗಳಿಗೆ ಒತ್ತಡ ಹಾಕುತ್ತಿದೆ. ಇದರಲ್ಲಿ ಸಿಎಂ ಹೆಸರು ಹೇಳಿ ಎಂದು ಮುಡಾ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಾರೆ ಎಂದು ಗಂಭೀರ ಆರೋಪ ಮಾಡಿದರು.

ಮೈಸೂರು ಮುಡಾ ವಿಚಾರದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಈಗಾಗಲೇ ಇ.ಡಿ ತನಿಖೆ ಮಾಡುತ್ತಿದೆ. ಮೊನ್ನೆ 300 ಕೋಟಿ ಎಂದು ಹೇಳಿದ್ದರು. ಸಿಎಂಗೂ ಅದಕ್ಕೂ ಸಂಬಂಧ ಇದ್ಯಾ ಎಂದು ಪ್ರಶ್ನೆ ಮಾಡಿದರು.

ಐಟಿ, ಇಡಿ ಬಿಜೆಪಿ ಪಕ್ಷದ ಕೈಗೊಂಬೆಗಳಾಗಿವೆ. ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು. ವಿರೋಧಿಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾವು ತಕ್ಕ ಉತ್ತರ ಕೊಟ್ಟು ಗಟ್ಟಿಯಾಗಿ ನಿಲ್ಲುತ್ತೇವೆ ಎಂದರು.

 

Tags:
error: Content is protected !!