ರಾಮನಗರ: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇದೆಲ್ಲಾ ಕೇಂದ್ರ ಸರ್ಕಾರದ ಷಡ್ಯಂತ್ರ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಈ ಕುರಿರು ರಾಮನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹೆಸರು ಹಾಳು ಮಾಡಲು ಕೇಂದ್ರ ಬಿಜೆಪಿ ಷಡ್ಯಂತ್ರ ಮಾಡುತ್ತಿದ್ದು, ತನಿಖಾಧಿಕಾರಿಗಳಿಗೆ ಒತ್ತಡ ಹಾಕುತ್ತಿದೆ. ಇದರಲ್ಲಿ ಸಿಎಂ ಹೆಸರು ಹೇಳಿ ಎಂದು ಮುಡಾ ಅಧಿಕಾರಿಗಳಿಗೆ ಧಮ್ಕಿ ಹಾಕುತ್ತಾರೆ ಎಂದು ಗಂಭೀರ ಆರೋಪ ಮಾಡಿದರು.
ಮೈಸೂರು ಮುಡಾ ವಿಚಾರದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಈಗಾಗಲೇ ಇ.ಡಿ ತನಿಖೆ ಮಾಡುತ್ತಿದೆ. ಮೊನ್ನೆ 300 ಕೋಟಿ ಎಂದು ಹೇಳಿದ್ದರು. ಸಿಎಂಗೂ ಅದಕ್ಕೂ ಸಂಬಂಧ ಇದ್ಯಾ ಎಂದು ಪ್ರಶ್ನೆ ಮಾಡಿದರು.
ಐಟಿ, ಇಡಿ ಬಿಜೆಪಿ ಪಕ್ಷದ ಕೈಗೊಂಬೆಗಳಾಗಿವೆ. ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು. ವಿರೋಧಿಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾವು ತಕ್ಕ ಉತ್ತರ ಕೊಟ್ಟು ಗಟ್ಟಿಯಾಗಿ ನಿಲ್ಲುತ್ತೇವೆ ಎಂದರು.
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…