Mysore
24
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಆಪ್ತ ಸಚಿವರ ಜೊತೆ ಡಿನ್ನರ್‌ ಮೀಟಿಂಗ್‌ ನಡೆಸಿದ ಸಿಎಂ ಸಿದ್ದರಾಮಯ್ಯ: ಸಭೆಯಲ್ಲಿ ಚರ್ಚೆಯಾದ ವಿಷಯಗಳಿವು

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್‌ ಮೀಟಿಂಗ್‌ ನಡೆಸಿದ್ದು, ಪವರ್‌ ಶೇರಿಂಗ್‌, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಡಿನ್ನರ್ ಮೀಟಿಂಗಡ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂರು ಅಜೆಂಡಾಗಳನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬ ಸದಸ್ಯರ ಜೊತೆ ವಿದೇಶ ಪ್ರವಾಸದಲ್ಲಿದ್ದು, ಎಂಜಾಯ್‌ ಮೂಡ್‌ನಲ್ಲಿದ್ದಾರೆ. ಈ ಬೆನ್ನಲ್ಲೇ ಇತ್ತ ಸಿಎಂ ಸಿದ್ದು ಬಣದಿಂದ ಡಿನ್ನರ್‌ ಪಾರ್ಟಿ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯ ಗಾಳಿ ಬೀಸಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ವಿದೇಶ ಪ್ರವಾಸದಲ್ಲಿರುವಾಗಲೇ ಯಾಕೆ ಈ ಸಭೆ ನಡೆಸಬೇಕಿತ್ತು ಎಂದು ಕೆಲ ಸಚಿವರು ಪ್ರಶ್ನೆ ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಆಪ್ತರಿಗೆ ಕೆಪಿಸಿಸಿ ಪಟ್ಟ ಸಿಗಲಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ಸಚಿವ ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್‌ ಮಾಡಿದ್ದು, ಇದರಲ್ಲಿ ಗೃಹ ಸಚಿವ ಪರಮೇಶ್ವರ್‌, ಸಚಿವ ಎಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ ಪಾಲ್ಗೊಂಡಿದ್ದರು.

ಇನ್ನು ರಾಜ್ಯ ಬಜೆಟ್‌ಗೂ ಮುನ್ನವೇ ಸಂಪುಟ ಪುನಾರಚನೆ ಗುಸು ಗುಸು ಕೇಳಿಬಂದಿದ್ದು, ಈ ಬೆನ್ನಲ್ಲೇ ಎರಡು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ಮುಂದಿನ ರಾಜಕೀಯ ಬದಲಾವಣೆಗಳ ಬಗ್ಗೆ ಡಿನ್ನರ್‌ ಪಾರ್ಟಿಯಲ್ಲೇ ಸುದೀರ್ಘ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.

 

Tags:
error: Content is protected !!