ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿದ್ದು, ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ಡಿನ್ನರ್ ಮೀಟಿಂಗಡ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೂರು ಅಜೆಂಡಾಗಳನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬ ಸದಸ್ಯರ ಜೊತೆ ವಿದೇಶ ಪ್ರವಾಸದಲ್ಲಿದ್ದು, ಎಂಜಾಯ್ ಮೂಡ್‌ನಲ್ಲಿದ್ದಾರೆ. ಈ ಬೆನ್ನಲ್ಲೇ ಇತ್ತ ಸಿಎಂ ಸಿದ್ದು ಬಣದಿಂದ ಡಿನ್ನರ್ ಪಾರ್ಟಿ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯ ಗಾಳಿ ಬೀಸಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಯಾಕೆ ಈ ಸಭೆ ನಡೆಸಬೇಕಿತ್ತು ಎಂದು ಕೆಲ ಸಚಿವರು ಪ್ರಶ್ನೆ ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಆಪ್ತರಿಗೆ ಕೆಪಿಸಿಸಿ ಪಟ್ಟ ಸಿಗಲಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.
ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ್ದು, ಇದರಲ್ಲಿ ಗೃಹ ಸಚಿವ ಪರಮೇಶ್ವರ್, ಸಚಿವ ಎಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ ಪಾಲ್ಗೊಂಡಿದ್ದರು.
ಇನ್ನು ರಾಜ್ಯ ಬಜೆಟ್‌ಗೂ ಮುನ್ನವೇ ಸಂಪುಟ ಪುನಾರಚನೆ ಗುಸು ಗುಸು ಕೇಳಿಬಂದಿದ್ದು, ಈ ಬೆನ್ನಲ್ಲೇ ಎರಡು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ಮುಂದಿನ ರಾಜಕೀಯ ಬದಲಾವಣೆಗಳ ಬಗ್ಗೆ ಡಿನ್ನರ್ ಪಾರ್ಟಿಯಲ್ಲೇ ಸುದೀರ್ಘ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…