ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್ ಪಾರ್ಟಿ ಮೀಟಿಂಗ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗಡ ಮಾಡಿ ಶಕ್ತಿ ಪ್ರದರ್ಶನ ಮಾಡಿದೆ ಎಂದು ಲೇವಡಿ ಮಾಡಿದರು.
ಇನ್ನು ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸಿದ್ದನ್ನು ಕಾರ್ಯಗತ ಮಾಡುವ ಸಮಯ ಬಂದೇಬಿಟ್ಟಿದೆ. ನಿಮ್ಮ ಮುಂದಿನ ನಿರ್ಧಾರ ಏನೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ 15% ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗಿದೆ.
ಒಬ್ಬ ಡಿಸಿಎಂ ಹಾಗೂ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತದೆ ಎಂದರೆ ಏನರ್ಥ ಎಂದು ಪ್ರಶ್ನೆ ಮಾಡಿದರು.
ಇದೆಲ್ಲಾ ಬೆಳವಣಿಗೆಗಳು ಆದ ಬಳಿಕ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರಿದರೆ ತಮ್ಮ ಕನಸು ನನಸಾಗಿಯೇ ಉಳಿಯುವುದು ಮಾತ್ರ ಗ್ಯಾರಂಟಿ ಎಂದು ವ್ಯಂಗ್ಯವಾಡಿದರು.
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…