ರಾಜ್ಯ

ಡಿಕೆಶಿ ವಿದೇಶದಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಡಿನ್ನರ್‌ ಮೀಟಿಂಗ್: ವಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್‌ ಪಾರ್ಟಿ ಮೀಟಿಂಗ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಅತ್ತ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗಡ ಮಾಡಿ ಶಕ್ತಿ ಪ್ರದರ್ಶನ ಮಾಡಿದೆ ಎಂದು ಲೇವಡಿ ಮಾಡಿದರು.

ಇನ್ನು ಸ್ವಾಮಿ ಡಿ.ಕೆ.ಶಿವಕುಮಾರ್‌ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸಿದ್ದನ್ನು ಕಾರ್ಯಗತ ಮಾಡುವ ಸಮಯ ಬಂದೇಬಿಟ್ಟಿದೆ. ನಿಮ್ಮ ಮುಂದಿನ ನಿರ್ಧಾರ ಏನೆಂದು ತೋರಿಸಿ ಎಂದು ಸವಾಲು ಹಾಕಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್‌ ಟಿಕೆಟ್‌ ದರ 15% ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗಿದೆ.

ಒಬ್ಬ ಡಿಸಿಎಂ ಹಾಗೂ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತದೆ ಎಂದರೆ ಏನರ್ಥ ಎಂದು ಪ್ರಶ್ನೆ ಮಾಡಿದರು.

ಇದೆಲ್ಲಾ ಬೆಳವಣಿಗೆಗಳು ಆದ ಬಳಿಕ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರಿದರೆ ತಮ್ಮ ಕನಸು ನನಸಾಗಿಯೇ ಉಳಿಯುವುದು ಮಾತ್ರ ಗ್ಯಾರಂಟಿ ಎಂದು ವ್ಯಂಗ್ಯವಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

13 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

13 hours ago