CM Siddaramaiah
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಬೆಂಗಳೂರು ನಗರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.
ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಭೈರತಿ ಸುರೇಶ್ ಹಾಗೂ ಇತರ ಜನಪ್ರತಿನಿಧಿಗಳೊಂದಿಗೆ ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.
ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು, ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90 ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದರು.
ಸಾಯಿ ಲೇಔಟ್‌ಗೆ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್‌ಗಳ ನಿರ್ಮಾಣ ಮತ್ತು ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ. ಬಿಬಿಎಂಪಿ ಇದಕ್ಕಾಗಿ ಒಟ್ಟು 13 ಕೋಟಿ ಬಿಡುಗಡೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ 6 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, 3 ಕೋಟಿ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಇನ್ನು ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಮುಲಾಜಿಲ್ಲದೆ ತೆರವುಗೊಳಿಸಲು ಸ್ಪಷ್ಟ ಸೂಚನೆ ನೀಡಿದ್ದು, ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…