ಬೆಂಗಳೂರು : 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.
ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ 168 ಪರಿಶಿಷ್ಟ ಜಾತಿ ಹಾಗೂ 32 ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು 200 ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ, ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ, ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಹಲವರು ಇದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…