ರಾಜ್ಯ

ಜಾತಿಗಳನ್ನು ಒಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಕೆಲಸಕ್ಕೆ ಮುಂದಾಗುತ್ತಿಲ್ಲ; ವಿಪಕ್ಷ ನಾಯಕ ಆರ್.ಅಶೋಕ್‌

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ಶುರುವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ನಡೆಯುತ್ತಿದ್ದು, ಅಭಿವೃದ್ಧಿ ಕೆಲಸಕ್ಕೆ ಯಾರೂ ಮುಂದಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕಾಗಿ ಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಭಾರೀ ದಂಗಲ್‌ ಶುರುವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್‌ ಅವರು. ಸಿಎಂ ಸ್ಥಾನದ ಕುರಿತು ಪಕ್ಷದೊಳಗೆ ಒಡಕು ಉಂಟಾಗಿದೆ. ಈ ಬಗ್ಗೆ ಒಕ್ಕಲಿಗ ಸ್ವಾಮೀಜಿ ಕೂಡ ಮಾತನಾಡಿದ್ದಾರೆ. ಸಿಎಂ ಬದಲಾವಣೆ ಹಾಗೂ ಮೂರು ಡಿಸಿಎಂ ಮಾಡುವಲ್ಲಿ ಎಲ್ಲರೂ ಮುಳುಗಿದ್ದು, ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ನಿಂತುಹೋಗಿವೆ ಎಂದು ಕಿಡಿಕಾರಿದರು.

ಮುಂದುವರಿದು ಮಾತನಾಡಿದ ಅವರು, ಈ ಸರ್ಕಾರಕ್ಕೆ ನೀರು ಕೊಡುವ ಯೋಗ್ಯತೆಯೂ ಇಲ್ಲವಾಗಿ, ಜನರು ಕಲುಷಿತ ನೀರು ಸೇವಿಸಿ ಸಾಯುತ್ತಿದ್ದಾರೆ. ಡೆಂಗ್ಯೂ ಸೋಂಕು ಹರಡಿ ಜನರು ತೊಂದರೆಗೊಳಗಾಗಿದ್ದರೂ ಅದಕ್ಕೆ ಸರ್ಕಾರ ಸೂಕ್ತ ಕ್ರಮ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗ ಒಕ್ಕಲಿಗರು ಹಾಗೂ ಲಿಂಗಾಯತರು ಮಾತಾಡುತ್ತಿದ್ದಾರೆ. ಮುಂದೆ ಕುರುಬ ಸಮುದಾಯದವರು ಮಾತನಾಡುತ್ತಾರೆ. ಜಾತಿಗಳ ನಡುವೆ ಕಾಂಗ್ರೆಸ್‌ ಕಚ್ಚಾಟ ಹುಟ್ಟುಹಾಕುತ್ತಿರುವುದು ಒಳ್ಳೆಯದಲ್ಲ. ಜಾತಿಗಳನ್ನು ಒಡೆಯುವ ಕಾಂಗ್ರೆಸ್‌ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಸಿಎಂ ಸಿದ್ದು ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

4 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

4 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

4 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

4 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

4 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago