Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಂವಿಧಾನ ಹಾಗೂ ಕಾನೂನು ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅರಿವಿಲ್ಲ: ಸಿ.ಟಿ.ರವಿ ಟೀಕೆ

ಚಿಕ್ಕಮಗಳೂರು: ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳಿಕೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌ಗೂ ಹೆದರಲ್ಲ. ನಾನು ಏನು ತಪ್ಪು ಮಾಡಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಹೇಳುತ್ತಿದ್ದಾರೆ. ಹಿಂದೆ ರಾಕ್ಷಸರು ನಾವು ಯಾರಿಗೂ ಹೆದರಲ್ಲ ಎಂದು ಸಂಭೋದಿಸುತ್ತಿದ್ದರು. ಇದೀಗ ಸಿದ್ದರಾಮಯ್ಯ ಅವರನ್ನು ಏನೆಂದು ಹೇಳಬೇಕೊ ಗೊತ್ತಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಟೀಕೆ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಯಾವುದೇ ನೈತಿಕತೆ ಆಗಲಿ ಅಥವಾ ಕಾನೂನು ಬಗ್ಗೆ ಭಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರಿಗೆ ಹೆದರಿದ್ದರೂ ಜನರಿಗೆ ಹೆದರಬೇಕು. ಆದರೆ ಸಿದ್ದರಾಮಯ್ಯ ಜನರಿಗಿಂತ ದೊಡ್ಡವರ ಎಂದು ಪ್ರಶ್ನಿಸಿದರು.

 

Tags: