ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾಭ್ಯಾಸ ಮಾಡಿದ್ದ ಶಾಲೆಯ ಅಭಿವೃದ್ಧಿಗೆ ತಲಾ ೧೦.ಲಕ್ಷ ರೂ. ವೈಯಕ್ತಿಕ ನೆರವು ನೀಡಿದ್ದಾರೆ.
ತಾವು ವಿದ್ಯಾಭ್ಯಾಸ ಮಾಡಿದ್ದ ಕುಪ್ಪೆಗಾಲ ಹಾಗೂ ಸಿದ್ದರಾಮಯ್ಯನ ಹುಂಡಿಯ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಮಾದರಿಯಾಗಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಶಾಲೆಗಳ ಅಭಿವೃದ್ದಿಗಾಗಿಯೇ ʼನನ್ನ ಶಾಲೆ ನನ್ನ ಅಭಿವೃದ್ದಿʼ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸದೆ. ಈ ಮೂಲಕ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳೆ ಶಾಲೆಯ ಅಭಿವೃದ್ದಿಗೆ ನೆರವಾಗುವ ಜವಬ್ದಾರಿ ನೀಡಲಾಗುತ್ತಿದೆ.
ಈ ಒಂದು ಯೋಜನೆಗೆ ಮಾ.೭ರಂದು ಚಾಲನೆ ದೊರಕಲಿದ್ದು, ತಾವು ಓದಿದ ಶಾಲೆಗೆ ಧೇಣಿಗೆ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಓದಿದ ಶಾಲೆಯ ಅಭಿವೃದ್ದಿಗೆ ನೆರವಾಗಿರುವುದು ಇದೇ ಮೊದಲಲ್ಲ.
ಈ ಹಿಂದೆ ೨೦೧೫ರಲ್ಲಿ ತಾವು ವಿದ್ಯಾಭ್ಯಾಸ ಮಾಡಿದ್ದ ಶಾಲೆಗೆ ೧ ಎಕ್ಕರೆ ಜಾಗ ನೀಡಿ, ೮ ಕೊಠಡಿ, ೨ ಶೌಚಾಲಯ ಇರುವ ಹೊಸ ಕಟ್ಟಡ ಕಟ್ಟಿಸುವ ಮೂಲಕ ಶಾಲೆಯನ್ನು ಉನ್ನತೀಕರಿಸಿದ್ದರು ಎಂದರು.
ಈಗ ಮುಖ್ಯಮಂತ್ರಿಗಳು ನೀಡುವ ದೇಣಿಗೆಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್‌ಗಳನ್ನು ನಡೆಸಲು ಸ್ಮಾರ್ಟ್ ಟಿವಿ, ಪ್ರೊಜೆಕ್ಟರ್, ಕುರ್ಚಿ, ಮೇಜು ಸೇರಿದಂತೆ ಅಗತ್ಯ ಪರಿಕರಗಳನ್ನು ತರಲಾಗುವುದು ಎಂದು ಅವರು ತಿಳಿಸಿದರು.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…