Mysore
31
scattered clouds

Social Media

ಮಂಗಳವಾರ, 19 ಮೇ 2026
Light
Dark

ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರನ್ನು ಸನ್ಮಾನಿಸಿದ ಸಿಎಂ ಸಿದ್ದರಾಮಯ್ಯ

 ಬೆಂಗಳೂರು: 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿಜೇತರಾದ ನಟಿ ಶಬಾನಾ ಅಜ್ಮಿ ಅವರಿಗೆ ಇಂದು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಯುಕ್ತ ನೀಡುವ ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿಪತ್ರ ಮತ್ತು 10 ಲಕ್ಷದ ಚೆಕ್ ನೀಡಿ, ಗೌರವಿಸಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಕವಿ ಜಾವೇದ್ ಅಖ್ತರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.

Tags:
error: Content is protected !!