ಬೆಂಗಳೂರು: ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೀರ್ತನಕಾರರಾದ ಕನಕದಾಸರ ಕೊಡುಗೆಗಳನ್ನು ಸ್ಮರಿಸಿದರು. ಈ ವೇಳೆ ಸಚಿವರಾದ ಎಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.





