ಬೆಂಗಳೂರು: ಇಂದು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಭವನದ ಮುಂಭಾಗ ಇರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಾಲ್ಮೀಕಿ ಅವರ ಜಯಂತೋತ್ಸವವನ್ನು ಪ್ರತಿವರ್ಷದಂತೆ ಈ ವರ್ಷವೂ ಆಚರಣೆ ಮಾಡುತ್ತಿದ್ದೇವೆ. ನಾಡಿನ ಜನತೆಗೆ ವಾಲ್ಮೀಕಿ ಜಯಂತಿಯ ಶುಭಾಶಯಗಳು. ಸರ್ಕಾರದ ವತಿಯಿಂದ ಜಯಂತಿ ಆಚರಣೆ ಮಾಡುತ್ತಿದ್ದೇವೆ. ವಾಲ್ಮೀಕಿ ಅವರು ದೇಶಕಂಡ ಪ್ರಬುದ್ಧ ಸಾಹಿತಿ. ರಾಮಾಯಣವನ್ನು ಬರೆಯುವ ಮೂಲಕ ಮಹಾನ್ ಕಾರ್ಯವನ್ನು ಬರೆದಿದ್ದಾರೆ. ರಾಮಾಯಣವನ್ನು ಇಡೀ ಜಗತ್ತಿಗೆ ಪರಿಚಯಿಸಿದ್ದಾರೆ ಎಂದು ವಾಲ್ಮೀಕಿಯನ್ನು ನೆನೆದರು.
ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಮುನಿಯಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.





