Mysore
25
scattered clouds
Light
Dark

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ: ತಮ್ಮ ತವರು ಜಿಲ್ಲೆಗೆ ಕೊಡುಗೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದ ಹಿನ್ನಲೆ ಒಂದು ವರುಷ ನೂರು‌ ಹರುಷ.! ಎಂಬ ಟ್ಯಾಗ್‌ ಲೈನ್‌ ಅಡಿಯಲ್ಲಿ ಮತ್ತೆ ಕೆಲವು ಪ್ರಗತಿ ಕಾರ್ಯಗಳಿಗೆ ಸರ್ಕಾರ ಆದೇಶ ನೀಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ‌ಬಂದು‌ ಒಂದು ವಸಂತ‌‌ ಪೂರೈಸಿದೆ. ಹಾಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯು ಒಂದು ವರ್ಷ ಅವಧಿಯಲ್ಲಿ ಪ್ರಗತಿಯತ್ತ ಸಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ತವರು ಜಿಲ್ಲೆ ಮೈಸೂರಿಗೆ ವಿಶೇಷ ಕೊಡುಗೆಯನ್ನು ನೀಡಿದ್ದಾರೆ.

ಅದು ಮೈಸೂರಿನ ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ಟ್ರಾಮ ಕೇರ್ ಸೆಂಟರ್’ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಿಸಿದೆ.

ಜತೆಗೆ ರಾಜ್ಯಾದ್ಯಂತ ನಾಲ್ಕು ಜಿಲ್ಲೆಗಳಲ್ಲಿ ವೈದ್ಯಕೀಯ ಸೇವೆ ನೀಡುವ ವಿವಿಧ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನುಮತಿ ನೀಡಿದೆ.

ಅದರಂತೆ ಕಲಬುರಗಿಯಲ್ಲಿ ‘ಟ್ರಾಮಾ ಕೇರ್ ಸೆಂಟರ್’ ಉದ್ಘಾಟನೆ, ಹಾಸನದಲ್ಲಿ 450 ಹಾಸಿಗೆಯುಳ್ಳ ನೂತನ ಆಸ್ಪತ್ರೆ ನಿರ್ಮಾಣ, ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನೂತನ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಸರ್ಕಾರ ತಿಳಿಸಿದೆ.