ಬೆಳಗಾವಿ: ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಹಾಯಧನ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ವಿದ್ಯಾರ್ಥಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೇರವಾಗಿ ಸಹಾಯಧನ ನೀಡುವ ಯಾವುದೇ ಕಾರ್ಯಕ್ರಮವಿರುವುದಿಲ್ಲ.
ಆದರೆ ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ಮಾನ್ಯತೆ ಪಡೆದ ರಾಜ್ಯ ಕ್ರೀಡಾ ಸಂಸ್ಥೆಗಳು ರಾಷ್ಟ್ರಮಟ್ಟದಲ್ಲಿ ಕ್ರೀಡಾಕೂಟಗಳಿಗೆ ಕಳುಹಿಸುವ ವಿದ್ಯಾರ್ಥಿಗಳನ್ನು ಒಳಗೊಂಡಂತೆ ರಾಜ್ಯದ ಕ್ರೀಡಾಪಟುಗಳಿಗೆ ಸಹಾಯಧನ ಮೊತ್ತ ಹೆಚ್ಚಳ ಮಾಡಲಾಗುತ್ತದೆ.
ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ 2ನೇ ದರ್ಜೆ ರೈಲು, ಬಸ್ ಪ್ರಯಾಣದ ದರದ ಪ್ರಯಾಣಭತ್ಯೆ, 200ರೂ ದಿನಭತ್ಯೆ, 1000ರೂಗಳ ಕ್ರೀಡಾಗಂಟು, ಸ್ಥಳೀಯ ಪ್ರಯಾಣ ಶುಲ್ಕ ರೂ 200 ನೀಡಲಾಗುತ್ತಿದ್ದು, ಪೂರ್ವಭಾವಿ ತರಬೇತಿ ಶಿಬಿರದಲ್ಲಿ ಭಾಗವಹಿಸಿದವರಿಗೂ 200ರೂ ಸಹಾಯಧನ ನೀಡಲಾಗುತ್ತಿದೆ.
ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕರ್ನಾಟಕದ ಕ್ರೀಡಾಪಟುಗಳಿಗೆ ನಗದು ಬಹುಮಾನ ಗರಿಷ್ಠ 5000ರೂ ಮಿತಿಗೆ ಒಳಪಟ್ಟು ಶೈಕ್ಷಣಿಕ ಶುಲ್ಕ ಮರುಪಾವತಿ ರೂಪದಲ್ಲಿ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ಬಾರಿ ಕ್ರೀಡಾಪಟುಗಳ ಭತ್ಯೆ ಹಾಗೂ ಸಹಾಯಧನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…