ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.
ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ ಗೇಟ್ ಮುರಿದು ಹೋಗಿರುವುದರಿಂದ ನೀರು ಖಾಲಿ ಮಾಡುವ ಸಲುವಾಗಿ ಎಲ್ಲಾ 33 ಗೇಟ್‌ಗಳನ್ನು ತೆರೆದು ಸುಮಾರು 1 ಲಕ್ಷ ಕ್ಯುಸೆಕ್ ನಷ್ಟು ನೀರನ್ನು ನದಿಗೆ ಬಿಡಲಾಗುತ್ತಿದೆ. ತುಂಗಭದ್ರಾ ಅಣೆಕಟ್ಟೆಯಿಂದ ಭಾರಿ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡುತ್ತಿದೆ. ಪ್ರವಾಸಿಗರಿಗೆ ಅಣೆಕಟ್ಟೆ ವೀಕ್ಷಣೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…