ರಾಜ್ಯ

ಗೆಜೆಟಿಯರ್‌, ಎಕನಾಮಿಕ್‌ ಸರ್ವೇಗಳನ್ನು ಡಿಸಿಗಳು ಕಡ್ಡಾಯವಾಗಿ ಓದಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಗೆಜೆಟಿಯರ್‌, ಎಕನಾಮಿಕ್‌ ಸರ್ವೇಗಳನ್ನು ಕಡ್ಡಾಯವಾಗಿ ಓದಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾಧಿಕಾರಿಗಳು ಗಜೆಟಿಯರ್‌, ಎಕನಾಮಿಕ್‌ ಸರ್ವೇ ಓದಿದರೆ ಆ ಜಿಲ್ಲೆಯ ಇತಿಹಾಸ, ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯ. ಫ್ರೇಸರ್‌ ಎಂಬ ಅಧಿಕಾರಿಯ ಸಲಹೆ ಇಲ್ಲದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಗಾಯಕ್‌ವಾಡ್‌, ಶಾಹು ಮಹಾರಾಜ ಮೊದಲಾದವರು ಒಳ್ಳೆಯ ಅರಸರೆಂದು ಹೆಸರುಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಬಳ್ಳಾರಿಯಲ್ಲಿ ಮನ್ರೋ ಎಂಬ ಅಧಿಕಾರಿ ಕಲೆಕ್ಟರ್‌ ಆಗಿದ್ದರು. ಇಂದಿಗೂ ಅಲ್ಲಿನ ಜನ ತಮ್ಮ ಮಕ್ಕಳಿಗೆ ಅವರ ಹೆಸರಿಡುತ್ತಾರೆ. ನಾವೆಲ್ಲರೂ ಜನಸೇವಕರು ಎಂಬ ಭಾವನೆಯಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಮ್ಮ ಜನರು ತಮ್ಮ ಮಕ್ಕಳಿಗೆ ನಿಮ್ಮ ಹೆಸರು ಇಡುವ ರೀತಿಯಲ್ಲಿ ಗುಣಾತ್ಮಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶಗಳಿವೆ, ನಿಮ್ಮಿಂದ ಇದು ಸಾಧ್ಯವಿದೆ ಎಂದರು.

ಬಡವರ ಬಗ್ಗೆ ಅನುಕಂಪ ಇರಬೇಕು. ಅಸಮಾನತೆ ನೀಗಿಸಲು ಪ್ರಯತ್ನಿಸಬೇಕು. ಬಸವಣ್ಣ, ಗಾಂಧೀಜಿ, ಅಂಬೇಡ್ಕರ್‌ ಅವರನ್ನು ಓದುತ್ತೇವೆ. ಸಂವಿಧಾನ ಅರಿತುಕೊಳ್ಳಬೇಕು ಎಂದು ಹೇಳುತ್ತೇವೆ. ಇದು ಕೇವಲ ಓದುವುದಕ್ಕಲ್ಲ; ಅನುಷ್ಠಾನ ಮಾಡುವುದಕ್ಕೆ ಎಂಬುದನ್ನು ಅರಿತುಕೊಳ್ಳಿ. ಈ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಪರಿಸ್ಥಿತಿ ಬದಲಾದಂತೆ ನಾವೂ ಬದಲಾಗಬೇಕು. ಕಲುಷಿತ ನೀರು ಕುಡಿದು ಹಲವು ಸಾವು- ನೋವುಗಳು ಸಂಭವಿಸಿವೆ. ಇಂತಹ ಪ್ರಕರಣಗಳು ಮರುಕಳಿಸಿದರೆ, ಹಿರಿಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ವಲಸೆ ಕುರಿಗಾರರ ಹಿತ ಕಾಪಾಡಿ ವಲಸೆ ಕುರಿಗಳ ಆಕಸ್ಮಿಕ ಮರಣ ಸಂಭವಿಸಿದಲ್ಲಿ ಮಾಲೀಕರಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು ಹಾಗೂ ಲೈಸೆನ್ಸ್‌ ಗನ್‌ ನೀಡುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಸಿಂಧುತ್ವ ಪ್ರಮಾಣ ಪತ್ರ ಸಕಾಲದಲ್ಲಿ ನೀಡಬೇಕು. ಇವುಗಳನ್ನು ಬಾಕಿ ಉಳಿಸಿಕೊಳ್ಳದೆ ಸೂಕ್ತ ಆದೇಶ ಹೊರಡಿಸಬೇಕು. ಅಭ್ಯರ್ಥಿಗಳಿಗೆ ಸಕಾಲದಲ್ಲಿ ಸಿಂಧುತ್ವ ಪ್ರಮಾಣ ಪತ್ರ ನೀಡದೆ ಇದ್ದರೆ ಅವರ ಭವಿಷ್ಯ ಹಾಳಾಗುವುದಿಲ್ಲವೇ ಎಂದು ಪ್ರಶ್ನಿಸಿದರು

ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿ ಉಳಿದಿರುವ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಬೇಕು. ಬುಡಕಟ್ಟು ಜನರಿಗೆ ಅರಣ್ಯ ಜಮೀನು ಮಂಜೂರು ಮಾಡಲು 26,126 ಅರ್ಜಿಗಳು ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅವರ ಹಾಡಿಗಳಿಗೆ ಹೋಗಲು ರಸ್ತೆ ಸಂಪರ್ಕ ಇರುವುದಿಲ್ಲ. ಈ ಬಗ್ಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಸೂಕ್ತ ಸುತ್ತೋಲೆ ಹೊರಡಿಸಲು ಸಿಎಂ ಸೂಚಿಸಿದರು.

ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಡಿಸಿ, ಸಿಇಓ, ಎಸ್ಪಿ ಇವರ ಪಾತ್ರ ದೊಡ್ಡದು. ಇವರು ಮೂರು ಜನ ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ಜೊತೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೆ ಅಭಿವೃದ್ಧಿ ವೇಗವಾಗಿ ಮಾಡಲು ಸಾಧ್ಯ. ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಇವು ಜನರನ್ನು ತಲುಪಬೇಕು. ಇದು ನಿಮ್ಮಿಂದ ಸಾಧ್ಯ ಎಂದು ಹೇಳಿದರು.

ನಾನು ಮಂತ್ರಿಯಾಗಿ 40 ವರ್ಷಗಳಾದವು. 40 ಕ್ಕೂ ಹೆಚ್ಚು ವರ್ಷಗಳಿಂದ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡುತ್ತಿದ್ದೇನೆ. ರಾಜಕಾರಣಿಗಳು, ಅಧಿಕಾರಿಗಳು ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಬೇಕು. ಆದರೆ ನಿರೀಕ್ಷಿತ ಮಟ್ಟದಲ್ಲಿ ಪರಿಣಾಮಕಾರಿಯಾಗಿಲ್ಲ. ಅವತ್ತು ಭ್ರಷ್ಟಾಚಾರ ಹೇಗಿತ್ತು, ಇವತ್ತು ಹೇಗಿದೆ ಎಂದು ನೋಡಿದಾಗ, ಕಾರ್ಯಾಂಗ ಮತ್ತು ಶಾಸಕಾಂಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಕಂಡುಬರುತ್ತದೆ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಪರಿಣಾಮಕಾರಿಯಾಗಿ ಕೆಲಸಮಾಡಬೇಕು

ಕರ್ನಾಟಕ ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿದೆ. ನೀವು ಕೆಲಸ ಮಾಡುವ ಜಿಲ್ಲೆಯ ಬಗ್ಗೆ ಮೊದಲೇ ತಿಳಿದುಕೊಂಡಿರಬೇಕು. ಅಲ್ಲಿನ ಆರ್ಥಿಕ ಸ್ಥಿತಿ, ಸಾಮಾಜಿಕ ಸ್ಥಿತಿಗಳ ಬಗ್ಗೆ ಅರಿತುಕೊಳ್ಳಬೇಕು. ಅಲ್ಲಿನ ಸಾಕ್ಷರತೆ, ಶಿಕ್ಷಣ, ತಲಾ ಆದಾಯ ಮೊದಲಾದವುಗಳ ಕುರಿತು ತಿಳಿದಿರಬೇಕು.

ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಕಡಿಮೆಯಾಗಿದೆ. ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಒಂದು ಕಾರಣವಾಗಲು ಸಾಧ್ಯವಿಲ್ಲ. ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು, ಸಿಇಓಗಳು, ಶಿಕ್ಷಣ ಇಲಾಖೆಯ ಹಿರಿ ಅಧಿಕಾರಿಗಳದೂ ಜವಾಬ್ದಾರಿ ಇದೆ. ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago