Mysore
14
broken clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದು, ಗೃಹಲಕ್ಷ್ಮೀಯರು ಫುಲ್‌ ಖುಷ್‌ ಆಗಿದ್ದಾರೆ.

ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಹಣ ಬಿಡುಗಡೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯ ಹಣ ಜನವರಿಯಿಂದ ಕೊಡಬೇಕಾಗಿದೆ. ಅದನ್ನು ಶೀಘ್ರದಲ್ಲೇ ಕೊಡುತ್ತೇವೆ ಎಂದು ಭರವಸೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಹೇಳಿದಂತೆ 2026-27ನೇ ಸಾಲಿಗೆ 7 ರೂಪಾಯಿ ಹಾಲಿನ ಪ್ರೋತ್ಸಾಹ ಧನ ಸಹ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.

ಇನ್ನು ಪ್ರಸಕ್ತ ಸಾಲಿನಲ್ಲಿ ಶೇಕಡಾ.50ರಷ್ಟು ರೈತರ ಆತ್ಮಹತ್ಯೆಗಳು ಕಡಿಮೆಯಾಗಿದೆ. ಬಿಜೆಪಿ ಆಡಳಿತದ ಅವಧಿಗಿಂತ ಕಡಿಮೆಯಾಗಿದೆ. ಫೆಬ್ರವರಿ ಅಂತ್ಯಕ್ಕೆ 640 ಮಂದಿ ರೈತರ ಆತ್ಮಹತ್ಯೆಯಾಗಿದೆ ಎಂದು ಮಾಹಿತಿ ನೀಡಿದರು.

 

Tags:
error: Content is protected !!