ರಾಜ್ಯ

ಡೆಂಗ್ಯು ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ: ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎರಡು ತಿಂಗಳ ಮಟ್ಟಿಗೆ ಟಾಸ್ಕ್ ಫೋರ್ಸ್ ಹೈ ಅಲರ್ಟ್ ಆಗಿದ್ದು ಡೆಂಗ್ಯು ತಡೆಗಟ್ಟಬೇಕು. ಏನು ಮಾಡಬೇಕು, ಎಷ್ಟು ಹಣ ಅಗತ್ಯವಿದೆ ಎನ್ನುವುದನ್ನು ತಿಳಿಸಿ. ತಕ್ಷಣ ಹಣ ಬಿಡುಗಡೆಗೆ ಸೂಚಿಸಿದ್ದೇನೆ. ಡೆಂಗ್ಯು ಹರಡದಂತೆ ನೋಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ ಎಮದು ಹೇಳಿದರು.

ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ಡೆಂಗ್ಯೂ ಚಿಕಿತ್ಸೆಗೆ ವಿಶೇಷ ವಾರ್ಡ್‌ ಸಜ್ಜುಗೊಳಿಸಬೇಕು. ಮೆಡಿಕಲ್‌ ಕಾಲೇಜುಗಳಲ್ಲಿಯೂ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು. ಡೆಂಗ್ಯೂ ಪತ್ತೆಗೆ ಪರೀಕ್ಷೆ ಹೆಚ್ಚಿಸಬೇಕು. ಡೆಂಗ್ಯೂ ಪಾಸಿಟಿವ್‌ ಇರುವ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಬೇಕು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್‌ ರಚಿಸಬೇಕು. ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ಪ್ರಸ್ತುತ ಸಾಲಿನಲ್ಲಿ 215 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದ್ದು, 42 ಕಡೆಗಳಲ್ಲಿ ಕಟ್ಟಡ ಗುರುತಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ 503 ನಮ್ಮ ಕ್ಲಿನಿಕ್‌ಗಳು ಕಾರ್ಯಾಚರಿಸುತ್ತಿವೆ. ನಮ್ಮ ಕ್ಲಿನಿಕ್‌ಗಳಲ್ಲಿ ಲಭ್ಯವಿರುವ ಸೇವೆಗಳ ಮಾಹಿತಿಯನ್ನು ಪ್ರಚುರಪಡಿಸಬೇಕು ಎಂದು ಸಲಹೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago