eshwar khandre
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ 4 ತಂಡ ನಿಯೋಜಿಸಲು ಹಾಗೂ ಡ್ರೋನ್ ಕ್ಯಾಮರಾ ಬಳಸುವಂತೆ ತಿಳಿಸಲಾಗಿದ್ದು, ಒಟ್ಟು 9 ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಚಾರಣಕ್ಕಾಗಿ ಕೇರಳದಿಂದ ಒಬ್ಬರೇ ಆಗಮಿಸಿ, ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂಸ್ಟೇಯಲ್ಲಿ ತಂಗಿದ್ದ ಶರಣ್ಯ ಅವರು ಗೈಡ್ ಹಾಗೂ ಇನ್ನಿತರ 15 ಚಾರಣಿಗರೊಂದಿಗೆ ಕಳೆದ ಗುರುವಾರ (ಏ.2) ಕೊಡಗಿನ ಎತ್ತರದ ಗಿರಿಶ್ರೇಣಿ ತಡಿಯಂಡಮೋಳ್ ಬೆಟ್ಟಕ್ಕೆ ತೆರಳಿದ್ದರು. ಅಂದು ಮಧ್ಯಾಹ್ನ ಆಕೆ ಕಾಣೆಯಾಗಿದ್ದು, ವಿಷಯ ತಿಳಿದ ಕೂಡಲೇ ಪೊಲೀಸರು, ನಕ್ಸಲ್ ನಿಗ್ರಹದಳ, ಶ್ವಾನದಳ ಮತ್ತು ಅರಣ್ಯ ಸಿಬ್ಬಂದಿ ಸೇರಿ 50 ಜನರ ಐದು ತಂಡಗಳು ಶೋಧ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಗುರುವಾರ ಕೊನೆಯದಾಗಿ ದೂರವಾಣಿ ಮೂಲಕ ಹೋಂಸ್ಟೇ ಸಂಪರ್ಕಿಸಿರುವ ಯುವತಿ, ತಾವು ದಾರಿತಪ್ಪಿದ್ದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ಇದೆ. ಅವರ ಫೊನ್ ಲೊಕೇಷನ್ ಆಧರಿಸಿ ಶೋಧ ನಡೆಸಲಾಗುತ್ತಿದೆ. ಸ್ಥಳೀಯ ಬುಡಕಟ್ಟು ಜನರೂ ನೆರವಿಗೆ ಧಾವಿಸಿದ್ದು, ಅತ್ಯಾಧುನಿಕ ಥರ್ಮಲ್ ಡ್ರೋನ್ ಕ್ಯಾಮರಾಗಳ ನೆರವೂ ಪಡೆಯಲಾಗಿದೆ, ಇಂದಿನಿಂದ ಹೆಚ್ಚುವರಿ ತಂಡ ನಿಯೋಜಿಸಲಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
ಯುವತಿ ಪತ್ತೆಗೆ ಮುಖ್ಯಮಂತ್ರಿ ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಣಕ್ಕೆ ತೆರಳಿದ್ದ ಯುವತಿ ಕಾಣಯಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವಂತೆ ಸೂಚನೆ ನೀಡಿದ್ದಾರೆ. ಇಂದು ಇನ್ನೂ ಹೆಚ್ಚುವರಿಯಾಗಿ 40 ಅರಣ್ಯ ಸಿಬ್ಬಂದಿಯನ್ನು ಶೋಧ ಕಾರ್ಯಕ್ಕೆ ನಿಯೋಜಿಸಲಾಗಿದೆ. ಕಾಣೆಯಾಗಿರುವ ಯುವತಿಯ ಪತ್ತೆಗೆ ಪ್ರಾಮಾಣಿಕ ಪ್ರಯತ್ನ ಮುಂದುವರಿದಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…