Mysore
19
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮುಗಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.

ಇದನ್ನು ಓದಿ: ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಇನ್ನು ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದು ಕಿಡಿಕಾರಿದರು.

ಜಾತಿ ಗಣತಿ ಸಮೀಕ್ಷೆ ಅವಧಿ ವಿಸ್ತರಣೆ ಕುರಿತು ಮಾತನಾಡಿದ ಅವರು, ಇಂದು ಸಮೀಕ್ಷೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಂತರ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Tags:
error: Content is protected !!