ಬೆಂಗಳೂರು: ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮುಗಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ನಡೆಯುವ ಸಂದರ್ಭದಲ್ಲಿ ಪರಿಗಣಿಸಲಾಗುವುದು ಎಂದರು.
ಇದನ್ನು ಓದಿ: ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ
ಇನ್ನು ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯ ನ್ಯಾಯಮೂರ್ತಿಯವರೇ ಈ ಘಟನೆಯನ್ನು ಕ್ಷಮಿಸಿದ್ದು, ಅವರ ದೊಡ್ಡಗುಣವನ್ನು ಬಿಂಬಿಸುತ್ತದೆ. ಆದರೆ ಇಂತಹ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಮನುವಾದಿಗಳ ಕೈವಾಡವಾಗಿದೆ ಎಂದು ಕಿಡಿಕಾರಿದರು.
ಜಾತಿ ಗಣತಿ ಸಮೀಕ್ಷೆ ಅವಧಿ ವಿಸ್ತರಣೆ ಕುರಿತು ಮಾತನಾಡಿದ ಅವರು, ಇಂದು ಸಮೀಕ್ಷೆಯ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಂತರ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…