ರಾಜ್ಯ

ಸಿಎಂ ಆಗಿ ಮುಂದುವರಿಕೆ : ಹೈಕಮಾಂಡ್‌ನತ್ತ ಬೊಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

ಮಂಗಳೂರು : ಸಿಎಂ ಬದಲಾವಣೆ ಬಗ್ಗೆ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಭಿನ್ನ ಹೇಳಿಕೆ ನೀಡಿದ್ದು, ಈತನಕ ನಾನೇ ಐದು ವರ್ಷ ಪೂರೈಸುವೆ ಎನ್ನುತಿದ್ದ ಸಿದ್ದರಾಮಯ್ಯ ಇದೀಗ ಹೈಕಮಾಂಡ್‌ ನತ್ತ ಬೊಟ್ಟು ಮಾಡಿದ್ದಾರೆ.

ಸೋಮವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಸಿಎಂ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾ ಹೈಕಮಾಂಡ್‌ಗೆ ಸೇರಿದ್ದಾಗಿದೆ. ನಾನೇ ಸಿಎಂ ಆಗಿ ಮುಂದುವರೆಯುವದರಲ್ಲಿಯೂ ಹೈ ತೀರ್ಮಾನವೇ ಅಂತೀಮ ಎಂದು ಹೇಳಿದ್ದಾರೆ.

ಇದನ್ನೂ ಓದಿ:-ಮೈಸೂರು | ಲಾಭದಾಸೆಗೆ ಬಿದ್ದ ಮಹಿಳೆಗೆ 1.58 ಕೋಟಿ ರೂ.ವಂಚನೆ! ಮೋಸ ಹೋಗಿದ್ದೇಗೆ?

ಇನ್ನೂ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರೇ ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು. ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್.ಐ.ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

ಎಸ್.ಐ.ಟಿ ವರದಿ
ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್.ಐ.ಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್.ಐ.ಟಿಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್.ಐ.ಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್.ಐ.ಟಿ ತಿಳಿಸಿರುವುದಾಗಿ ಗೃಹಸಚಿವರು ತಿಳಿಸಿರುವುದಾಗಿ ತಿಳಿಸಿದರು.

ವಾಹನ ಸೌಲಭ್ಯ
ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 mins ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

20 mins ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

23 mins ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

26 mins ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

28 mins ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

33 mins ago